ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in ವೆಬ್‍ಸೈಟ್ ಸಂಪರ್ಕಿಸಿ, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್‍ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…