ಮಂಗಳೂರು : ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೂ ಕಾಮಗಾರಿ ಇನ್ನೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಯಾವುದೇ ವಿಳಂಭವಿಲ್ಲದೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲು ಪಂಚಾಯತ್‍ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಸರಕಾರ ಪ್ರತೀ ಕಿಲೋ ಮೀಟರ್ ರಸ್ತೆ ದುರಸ್ತಿಗೆ ನೀಡುತ್ತಿರುವ ಅನುದಾನದಿಂದ ಇಡೀ ರಸ್ತೆ ದುರಸ್ತಿಗೆ ಬದಲು ಅತೀ ಹೆಚ್ಚು ಹಾನಿಗೀಡಾದ ಭಾಗದ ರಸ್ತೆಯನ್ನು ಆದ್ಯತೆಯಲ್ಲಿ ದುರಸ್ತಿ ಮಾಡಬೇಕು. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಇದ್ದರು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…