ಗ್ರೀನ್ ಸಿಟಿ ಫೋರಂ ಮುಂದಾಳತ್ವದಲ್ಲಿ ತಲಕಾವೇರಿ ಸ್ವಚ್ಛತೆ

October 17, 2019
12:00 PM

ಭಾಗಮಂಡಲ: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಕ್ಷೇತ್ರದಲ್ಲಿ ಅ.18 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ  ಗ್ರೀನ್ ಸಿಟಿ ಫೋರಂ ಸಂಘಟನೆ ನೇತೃತ್ವದಲ್ಲಿ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು, ಕ್ಲೀನ್ ಕೂರ್ಗ್ ಇನ್ಸೆಟಿವ್ (ಸಿಸಿಐ) ಸಂಘಟನೆ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Advertisement
Advertisement

ತಲಕಾವೇರಿ ಕ್ಷೇತ್ರದ ಪ್ರವೇಶದ್ವಾರದಿಂದ ಸ್ವಚ್ಛತೆ ಪ್ರಾರಂಭಿಸಲಾಯಿತು. ರಸ್ತೆ ಎರಡು ಬದಿಯಲ್ಲಿದ್ದ ಬಾಟಲಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕುವುದರ ಮೂಲಕ ಸ್ವಚ್ಛಗೊಳಿಸಲಾಯಿತು. ಈ ವೇಳೆ ವಾಹನಗಳಲ್ಲಿ ಆಗಮಿಸಿದ ಪ್ರವಾಸಿಗರಿಗೆ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಲಾಯಿತು. ದಕ್ಷಿಣ ಭಾರತದ ಜೀವನದಿ ಕಾವೇರಿ ಕ್ಷೇತ್ರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶ ರವಾನಿಸಲಾಯಿತು.

ನಾಲ್ಕು ವರ್ಷದಿಂದ ಕಾವೇರಿ ತೀರ್ಥೋದ್ಭವಕ್ಕೆ ಮುನ್ನ ತಲಕಾವೇರಿಯಿಂದ ಭಾಗಮಂಡಲದವರೆಗೂ ಸ್ವಚ್ಛತೆ ಮಾಡಲಾಗುತ್ತಿದೆ. ನಮ್ಮ ನಡೆ ಸ್ವಚ್ಛತೆ ಕಡೆ ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದ ಸ್ವಚ್ಛತೆ ಮಾಡಲಾಗುತ್ತಿದೆ ಎಂದು ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹೇಳಿದರು. ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಪವಿತ್ರ ಕ್ಷೇತ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರು ಮುತುವರ್ಜಿ ವಹಿಸಬೇಕೆಂದು ಗ್ರೀನ್ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಹೇಳಿದರು.

ಪ್ರತಿಯೊಬ್ಬರ ಸಹಕಾರದಿಂದ ಸ್ವಚ್ಛತೆ ಕಾಪಾಡಲು ಸಾಧ್ಯವಾಗಿದೆ. ಹಲವು ವರ್ಷಗಳಿಗೆ ಹೋಲಿಸಿದ್ದಲ್ಲಿ ಈಗ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿದೆ. ಪ್ರತಿಯೊಂದು ಸ್ಥಳದಲ್ಲಿಯೂ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ ಎಂದು ಕ್ಲೀನ್ ಕೂರ್ಗ್ ಇನ್ಸೆಟಿವ್ ಪ್ರಮುಖರಾಡ ಬಡುವಂಡ ಅರುಣ್ ಅಪ್ಪಚ್ಚು ಹೇಳಿದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಉತ್ಪಾದನೆ ಮೊದಲು ನಿಲ್ಲಿಸಬೇಕು. ಸ್ನೇಹಿ ವಸ್ತುಗಳನ್ನು ಮಾತ್ರ ಬಳಸುವಂತಾಗಬೇಕು. ನಮ್ಮ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್ ಹೇಳಿದರು.

ಸ್ವಚ್ಛತೆಯಲ್ಲಿ ಗ್ರೀನ್ ಸಿಟಿ ಫೋರಂ ಪ್ರಧಾನ ಕಾರ್ಯದರ್ಶಿ ಪೂಳಕಂಡ ರಾಜೇಶ್, ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ನಿರ್ದೇಶಕರಾದ ಮೋಂತಿ ಗಣೇಶ್, ಅಜ್ಜಮಾಡ ರಮೇಶ್ ಕುಟ್ಟಪ್ಪ, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಶಿಕ್ಷಕರಾದ ಸುನಿತಾ, ತನುಜಾ, ಕ್ಲೀನ್ ಕೂರ್ಗ್ ಇನ್ಸೆಟಿವ್ ಪ್ರತಿನಿಧಿಗಳಾದ ಪ್ರಶಾಂತ್ ಚಿಣ್ಣಪ್ಪ, ಕರಣ್ ಸುಬ್ಬಯ್ಯ, ಮನೆಯಪಂಡ ಬೋಪಣ್ಣ, ಸುಜಿತ್ ಮುದ್ದಪ್ಪ ಪಾಲ್ಗೊಂಡಿದ್ದರು.

Advertisement

(

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group