Advertisement
ರಾಷ್ಟ್ರೀಯ

ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

Share

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

9 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

14 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

19 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

23 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago