ಬೆಂಗಳೂರು: ಚಂದ್ರಯಾನ 2 ರಲ್ಲಿ ಸಂಪರ್ಕ ಕಡಿತಗೊಂಡಿದ್ದ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರ್ಬಿಟರ್ ಕಳುಹಿಸಿರುವ ಚಿತ್ರದಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದ್ದು ಇದೀಗ ವಿಕ್ರಂ ಜೊತೆ ಸಂಪರ್ಕ ಸಾಧಿಸಲು ಇಸ್ರೋ ವಿಜ್ಞಾನಿಗಳ ತಂಡ ಪ್ರಯತ್ನ ಮಾಡುತ್ತಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಚಂದ್ರಯಾನ-2 ಯೋಜನೆಯಲ್ಲಿ ಸಾಫ್ಟ್ ಲ್ಯಾಂಡಿಂಗ್ ವೇಳೆ ಲ್ಯಾಂಡರ್ ಜೊತೆ ಸಂಪರ್ಕ ಕಡಿತಗೊಂಡಿತ್ತು. ಅದಾದ ಬಳಿಕ ಸತತವಾಗಿ ಲ್ಯಾಂಡರ್ ಪತ್ತೆಗೆ ಪ್ರಯತ್ನ ನಡೆಯುತ್ತಿತ್ತು. ಚಂದ್ರನ ಕಕ್ಷೆಯಲ್ಲಿ ನಿಗದಿತವಾಗಿ ಕಾರ್ಯನಿರ್ವಹಿಸುತ್ತಿರುವ ಕಕ್ಷಾಗಾರ (ಆರ್ಬಿಟರ್) ಅತ್ಯಂತ ಸುರಕ್ಷಿತ ಮತ್ತು ಆರೋಗ್ಯಕರವಾಗಿತ್ತು. ಇದರಲ್ಲಿ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ. ಹೀಗಾಗಿ ಆರ್ಬಿಟರ್ ಮೂಲಕ ಫೋಟೊ ತೆಗೆಯಲಾಗುತ್ತಿದ್ದು ಇದರಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂದು ಇಸ್ರೋ ತಿಳಿಸಿದೆ. ಸುಮಾರು 1600 ಕೆಜಿ ತೂಕದ ವಿಕ್ರಂ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿತ್ತು.
ಮೂರು ದಿನಗಳಲ್ಲಿ ವಿಕ್ರಂ ಪತ್ತೆಯಾಗಿ ನಮ್ಮ ಸಂಪರ್ಕಕ್ಕೆ ಬರುವ ಸಾಧ್ಯತೆ ಇದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ದೂರದರ್ಶನಕ್ಕೆ ನೀಡಿದ ವಿಶೇಷ ಸಂದರ್ಶನವೊಂದರಲ್ಲಿ ತಿಳಿಸಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…