Advertisement
ಕಾರ್ಯಕ್ರಮಗಳು

ಚಂದ್ರಶೇಖರ ಪೇರಾಲಿಗೆ ಯೆನೆಪೊಯ ಶಿಕ್ಷಕ ಪ್ರಶಸ್ತಿ

Share

ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ ಪ್ರಸಕ್ತ ಸಾಲಿನ ಯೆನೆಪೊಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ನಗದು ಹಾಗು ಫಲಕ ಒಳಗೊಂಡ ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಪೇರಾಲು, ನಾನು ಬಾಲ್ಯದಲ್ಲಿ 10 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಹೋಗಿ ಸುಳ್ಯದ ಕುಗ್ರಾಮ ವೊಂದರಲ್ಲಿರುವ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಗ್ರಾಮೀಣ ಶಾಲೆಗಳ ಮಕ್ಕಳ ಬಡತನ ಕಂಡು ಅವರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸತೊಡಗಿದ್ದೇನೆಶಾಲೆಯಲ್ಲಿ, ಸರಕಾರಿ ಕಚೇರಿಯಲ್ಲಿ ಉತ್ತಮ ವಾತಾವರಣವನ್ನು, ಆಕರ್ಷಕ ಗೊಳಿಸುವ ಕೆಲಸವನ್ನು ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಉತ್ತಮ ಪ್ರೇರಕರು, ಮಾರ್ಗದರ್ಶಿಗಳು ಆಗಿರಬೇಕು ಎಂದರು.

ಎಡ್ವರ್ಡ್ ಡಿಸೋಜ ಮಾತನಾಡಿ, ಬೆಳ್ತಂಗಡಿಯ ಶಾಲೆಯಲ್ಲಿ ಕಾಣಿಕೆ ಡಬ್ಬಿ ಇಟ್ಟು ಸಂಗ್ರಹವಾದ ಹಣದಿಂದ ಶಾಲೆಯ ಅಭಿವೃದ್ಧಿ ಮಾಡಿದ ತೃಪ್ತಿ ಇದೆ ಎಂದರು. ವೈಎಂಕೆ ಸ್ಮಾರಕ ಉಪನ್ಯಾಸ ನೀಡಿದ ಮಂಗಳೂರು ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಎಸ್.ಎಂ.ಶಿವಪ್ರಕಾಶ್, ವಿದ್ಯಾರ್ಥಿಗಳು ನಿರಂತರ ಕ್ರಿಯಾಶೀಲತೆಯೊಂದಿಗೆ ನಿರಂತರ ಕಲಿಕೆಯೊಂದು ಸ್ವಯಂಸ್ಫೂರ್ತಿ ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

12 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago