ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಇಬ್ಬರ ದಾರುಣ ಸಾವು

May 4, 2019
10:11 PM

ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.

ಯಾವುದೇ ಗಾಳಿಯೂ ಇರಲಿಲ್ಲ  ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ  ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್  ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್‍ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ  ಮೃತಪಟ್ಟಿದ್ದಾರೆ.

 

ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ  ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror