ಚಾರ್ಮಾಡಿ ನದಿಯಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆ…!

September 25, 2019
9:31 PM

ಬೆಳ್ತಂಗಡಿ: ಬುಧವಾರ ಸಂಜೆ ಸುರಿದ ಮಳೆಗೆ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶದ ನದಿಗಳಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ನೀರಿನ ರಭಸಕ್ಕೆ ಹಲವು ತೋಟಗಳಿಗೆ ನೀರು ನುಗ್ಗಿದರೆ , ಈಚೆಗೆ ನಿರ್ಮಾಣ ಮಾಡಿದ ರಸ್ತೆಗಳೂ ಕೊಚ್ಚಿ ಹೋದವು.

ಬುಧವಾರ ಸಂಜೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಿತು. ಆದರೆ  ದಿಡುಪೆ ಸೇತುವೆಯ ಸಮೀಪ ಹಾಗೂ ಕುಕ್ಕಾವು ಸೇತುವೆಯ ಸಮೀಪ ನದಿ ನೀರು ಪ್ರವಾಹ ಮಾದರಿಯಲ್ಲಿ  ಉಕ್ಕಿ ಹರಿದಿದೆ. ಇದರ ಜೊತೆಗೆ ಅರಣ್ಯದ ಕಡೆಯಿಂದ ಬರುವ ಎಲ್ಲಾ ಹೊಳೆಗಳೂ ತುಂಬಿ ಹರಿದ ನೀರು ತೋಟಗಳಿಗೂ ನುಗ್ಗಿದೆ. ದಿಡುಪೆಯಲ್ಲಿ ಹಾಗೂ ಕುಕ್ಕಾವಿನಲ್ಲಿ ಕಳೆದ ಪ್ರವಾಹದ ಸಂದರ್ಭದಲ್ಲಿ ಹಾನಿಗೆ ಈಡಾಗಿದ್ದ ರಸ್ತೆಗಳನ್ನು  ಮಣ್ಣು ಹಾಕಿ ಮರು ನಿರ್ಮಿಸಲಾಗಿತ್ತು.  ಈ ರಸ್ತೆಗಳು  ಬಹುತೇಕ ನೀರಿಗೆ ಕೊಚ್ಚಿ ಹೋಗಿದೆ. ನದಿ ಕೊರತಕ್ಕೆ ಒಳಗಾಗಿದ್ದ ಪ್ರದೇಶಗಳಲ್ಲಿ ನದಿ ಬದಿಯಲ್ಲಿ ಹಾಕಲಾಗಿದ್ದ ತಡೆಗೋಡೆಗಳು ಮತ್ತೆ ಕೊಚ್ಚಿ ಹೋಗಿದೆ. ತೋಟಗಳಲ್ಲಿ ಮತ್ತೆ ಮರಳು ಹಾಗೂ ಮಣ್ಣು ತುಂಬಿಕೊಂಡಿದೆ.

ಕೊಳಂಬೆ ಪ್ರದೇಶದಲ್ಲಿ ತೋಟಗಳಿಗೆ ಹಾಗೂ ಗದ್ದೆಗಳಿಗೆ ನುಗ್ಗಿದ್ದ ಮರಳನ್ನು ಈಗಾಗಲೆ ತೆರವು ಗೊಳಿಸಲಾಗಿತ್ತು ಇದೀಗ ಪ್ರವಾಹದೊಂದಿಗೆ ಮತ್ತೆ ಮರಳು ಬಂದು ಸೇರಿಕೊಂಡಿದೆ. ನೀರು ಏರುತ್ತಿರುವುದನ್ನು ನೋಡಿ ಜನರು ಮತ್ತೆ ಪ್ರವಾಹದ ಭಯದಲ್ಲಿ ಮನೆಗಳಿಂದ ಹೊರಗೆ ಬಂದಿದ್ದರು. ಆದರೆ ನಿಧಾನವಾಗಿ ನದಿ ನೀರು ಇಳಿಯಲಾರಂಭಿಸಿದೆ. ರಾತ್ರಿಯ ವೇಳೆ ಈ ಪ್ರದೇಶಗಳಲ್ಲಿ ಮತ್ತೆ ಮಳೆ ಸುರಿಯಲಾರಂಭಿಸದ್ದು ಮತ್ತೆ ಜನರಲ್ಲಿ ಭಯ ಮೂಡಲು ಕಾರಣವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror