ಚಾರ್ಮಾಡಿ ಪ್ರದೇಶಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

August 31, 2019
7:32 PM

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಾನಿ, ಅನಾರು ಮತ್ತು ಹೊಸ್ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಇದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬಳಿಕ ಧರ್ಮಸ್ಥಕ್ಕೆ ಬಂದು ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರನ್ನು ಸ್ವಾಗತಿಸಿದರು.ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಪ್ರಧಾನಿಗಳು ರಾಜ್ಯದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ ಸಿದ್ಧರಾಮಯ್ಯ, ಈಗ ಬಿಜೆಪಿ ಸರಕಾರ ರಚನೆಯ ಖುಷಿಯಲ್ಲಿಯೇ ಇದೆ. ಬಿ.ಜೆ.ಪಿಯವರು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಮಾಡುವುದಿಲ್ಲ. ಕುಣಿಯಲು ಬಾರದವರು ರಂಗಸ್ಥಳ ಸರಿ ಇಲ್ಲ ಅಂದ   ಹಾಗೆ ಅವರು ಯಾವ ಕೆಲಸವನ್ನೂ ಸುಸೂತ್ರವಾಗಿ ಮಾಡುವುದಿಲ್ಲ ಎಂದು ಟೀಕಿಸಿದರು.

ಧರ್ಮಸ್ಥಳದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು. ಮಾಜಿ ಸಚಿವ ಯು.ಟಿ.ಖಾದರ್, ಅಭಯಚಂದ್ರಜೈನ್ , .ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್‍ಕುಮಾರ್ , ಪ್ರಮುಖರಾದ ವಸಂತ ಬಂಗೇರ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror