ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಾನಿ, ಅನಾರು ಮತ್ತು ಹೊಸ್ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಇದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬಳಿಕ ಧರ್ಮಸ್ಥಕ್ಕೆ ಬಂದು ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರನ್ನು ಸ್ವಾಗತಿಸಿದರು.ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಪ್ರಧಾನಿಗಳು ರಾಜ್ಯದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ ಸಿದ್ಧರಾಮಯ್ಯ, ಈಗ ಬಿಜೆಪಿ ಸರಕಾರ ರಚನೆಯ ಖುಷಿಯಲ್ಲಿಯೇ ಇದೆ. ಬಿ.ಜೆ.ಪಿಯವರು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಮಾಡುವುದಿಲ್ಲ. ಕುಣಿಯಲು ಬಾರದವರು ರಂಗಸ್ಥಳ ಸರಿ ಇಲ್ಲ ಅಂದ ಹಾಗೆ ಅವರು ಯಾವ ಕೆಲಸವನ್ನೂ ಸುಸೂತ್ರವಾಗಿ ಮಾಡುವುದಿಲ್ಲ ಎಂದು ಟೀಕಿಸಿದರು.
ಧರ್ಮಸ್ಥಳದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು. ಮಾಜಿ ಸಚಿವ ಯು.ಟಿ.ಖಾದರ್, ಅಭಯಚಂದ್ರಜೈನ್ , .ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್‍ಕುಮಾರ್ , ಪ್ರಮುಖರಾದ ವಸಂತ ಬಂಗೇರ ಮೊದಲಾದವರು ಇದ್ದರು.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…