ಮಂಗಳೂರು: ಉಸಿರಾಟದ ಸಮಸ್ಯೆಯಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಕಸ್ತೂರ್‌ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಇಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.
ಕಫ ಹಾಗೂ ಉಸಿರಾಟದ ಸಮಸ್ಯೆಯಿಂದ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದರು. ಶ್ರೀಗಳ ಆರೋಗ್ಯ ಸ್ಥಿತಿ ವಿಚಾರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಗಳ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿದ್ದರು. ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಇಂದು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆಯಿದೆ.
ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಸ್ಥಿತಿ ಚಿಂತಾಜನಕವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನದವರೆಗೆ ಶ್ರೀಗಳ ದೇಹದಿಂದ ಮೂತ್ರ ವಿಸರ್ಜನೆಯಾಗಿರುವುದನ್ನು ನೋಡಿದ್ದೇನೆ. ಆದಷ್ಟು ಬೇಗ ಅವರು ಗುಣಮುಖರಾಗುತ್ತಾರೆ. ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ. ಶ್ರೀಗಳು ಗುಣಮುಖರಾಗುವಂತೆ ಪೂಜೆ ಪುನಸ್ಕಾರಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…