ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.
Advertisement
ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.
Advertisement
ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement