ಚೀನಾ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮ

June 16, 2020
11:37 PM

ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ  ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ  ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.

ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror