ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಚುಟುಕು ಸಂಕಲನ-2020 ಬಿಡುಗಡೆ ಕಾರ್ಯಕ್ರಮ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ಚುಟುಕಿನ 55 ಕವಿಗಳು ಪುಸ್ತಕ ಬಿಡುಗಡೆಗೊಳಿಸಿದ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ, ಕನ್ನಡ ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯದ ಕೊಡುಗೆ ಅಪಾರ. ಬಿಡುಗಡೆಗೊಂಡ ಚುಟುಕು ಸಂಕಲನವು ಚುಟುಕಿನ ಜೊತೆಗೆ ಕವಿಗಳನ್ನು ಪರಿಚಯಿಸುತ್ತಿರುವುದು ವಿಶೇಷ. ಈ ಮೂಲಕ ಚುಟುಕು ಹಾಗೂ ಕವಿಗಳ ದಾಖಲೀಕರಣವಾಗುತ್ತದೆ. ಇದು ಇತಿಹಾಸದ ಭಾಗವಾಗಿ ಭವಿಷ್ಯದಲ್ಲಿ ಅಧ್ಯಯನಕ್ಕೆ ಪೂರಕವಾಗುತ್ತದೆ ಎಂದರು.
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ, ಮಹಾಭಾರತದಲ್ಲಿ ಕರ್ಣ, ರಾಷ್ಟ್ರಕವಿ ಕುವೆಂಪು, ಸೇರಿದಂತೆ ಯಕ್ಷಗಾನದಲ್ಲಿಯೂ ಕೂಡ ಚುಟುಕು ಸಾಹಿತ್ಯವನ್ನು ಅರಿತುಕೊಳ್ಳಬಹುದು. ಚುಟುಕು ರಚನೆಗೆ ಭಾಷಾಪ್ರಭುತ್ವತೆ, ಚಾತುರ್ಯ, ಜೊತೆಗೆ ನೋವು ನಲಿವು ಬೆಸೆಯುವ ಅಂಶ ಒಳಗೊಂಡಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕುನಾ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ವಿಜಯಲಕ್ಷ್ಮಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಸುರೇಶ್ ನೆಗಳಗುಳಿ ಮತ್ತಿತರರು ಉಪಸ್ಥಿತರಿದ್ದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …