ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯದ ಕಾರಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ: ಜೆ.ಪಿ ರೈ ಸ್ಪಷ್ಟನೆ

September 4, 2019
3:16 PM

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement

ವಿದೇಶ ಪ್ರವಾಸ ಮಾಡುವ ಕಾರಣ‌ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ‌ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.

Advertisement

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರು ಪೂರೈಕೆ | ಮುಖ್ಯಮಂತ್ರಿ ಸಿದ್ದರಾಮಯ್ಯ
November 9, 2024
7:23 AM
by: The Rural Mirror ಸುದ್ದಿಜಾಲ
ಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು
November 8, 2024
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror