ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ವಿದೇಶ ಪ್ರವಾಸ ಮಾಡುವ ಕಾರಣ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…