ಚೆಂಬು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗುರುವಾರ ಪೌಷ್ಟಿಕಾಂಶಯುಕ್ತ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಕುರಿತು ಮಾಹಿತಿ ನೀಡಲಾಯಿತು.
ಶಾಲಾ ಪರಿಸರದಲ್ಲಿ ಪೌಷ್ಟಿಕಾಂಶಯುಕ್ತ ಹಣ್ಣುಗಳು ದೊರಕುವಂತೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಮಡಿಕೇರಿ ತೋಟಗಾರಿಕಾ ಇಲಾಖೆ ತಾಲೂಕು ಪಂಚಾಯತ್ ಅನುದಾನದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ವಿತರಿಸಲು ಮುಂದಾಗಿದೆ. ಅದರಂತೆಯೇ ಮಡಿಕೇರಿ ತಾಲೂಕು, ಸಂಪಾಜೆ ಕ್ಲಸ್ಟರ್ ವ್ಯಾಪ್ತಿಯ ಸ.ಹಿ.ಪ್ರಾ.ಶಾಲೆ ಊರುಬೈಲು ಚೆಂಬುವಿನಲ್ಲಿ ತೋಟಗಾರಿಕಾ ಇಲಾಖಾ ವತಿಯಿಂದ ನೀಡಲ್ಪಟ್ಟಿದ್ದ ಗಿಡಗಳನ್ನು ನೆಟ್ಟು ” ನಮ್ಮ ಪರಿಸರ ” ಎಂಬ ಶಾಲಾ ಯೋಜನೆಯಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರಪಂಧ, ಚರ್ಚಾ ಸ್ಪರ್ಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯಕ್ರಮಕ್ಕೆ ಮೆರಗು ತಂದುಕೊಂಡರು . ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.