ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ ಅಭ್ಯುದಯ ಯುವಕ ಮಂಡಲ ಚೆನ್ನಾವರ, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಗಾಂಧೀ ಜಯಂತಿ, ಸ್ವಚ್ಚತೆಯ ಕುರಿತು ಉಪನ್ಯಾಸ ನಡೆಯಿತು.
Advertisement
ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಅವರು ಸ್ವಚ್ಚತೆಯ ಕುರಿತು ಮಾತನಾಡಿ ನಮ್ಮ ದೇಶ ಪ್ಲಾಸ್ಟಿಕ್ ಮುಕ್ತವಾದಾಗ ಆರೋಗ್ಯಪೂರ್ಣ ವಾತಾವರಣ ನಿರ್ಮಾಣವಾಗಬಹುದು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಅನಿವಾರ್ಯ ಎಂದರು.
Advertisement
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಪುಟ್ಟಣ್ಣ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೀಲಾವತಿ ಧರ್ಮಪಾಲ, ಸದಸ್ಯೆ ಚಂದ್ರಿಕಾ ಜಗದೀಶ್ ,ಯುವಕ ಮಂಡಲದ ಸದಸ್ಯ ಚರಣ್ ರೈ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಗಾಂಧೀ ಸ್ಮೃತಿ, ಭಾಷಣ ನಡೆಯಿತು. ಶಿಕ್ಷಕಿ ಶ್ವೇತಾ ಸ್ವಾಗತಿಸಿ ವಂದಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement