ಚೊಕ್ಕಾಡಿ: ಶ್ರೀರಾಮ ಸೇವಾ ಸಮಿತಿ ಮತ್ತು ಚೊಕ್ಕಾಡಿ ಹವ್ಯಕ ವಲಯದ ಆಶ್ರಯದಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಪ್ರಾಯೋಜಕತ್ವದೊಂದಿಗೆ ಶ್ರೀರಾಮ ದೇವಾಲಯದಲ್ಲಿ ರಕ್ತದಾನ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಉಪ್ಪಿನಂಗಡಿ ಹವ್ಯಕ ಮಹಾಮಂಡಲದ ಅಧ್ಯಕ್ಷ ಅಶೋಕ ಕೆದಿಲ,’ ದಾನಗಳಲ್ಲಿ ಶ್ರೇಷ್ಠವಾದ ದಾನವೇ ರಕ್ತದಾನ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬಲ್ಲ ಕಾರ್ಯ ರಕ್ತದಾನವಾಗಿದೆ. ಆರೋಗ್ಯಕ್ಕೂ ರಕ್ತದಾನ ಒಳ್ಳೆಯದು’ ಎಂದು ಹೇಳಿದರು.
ರಕ್ತದಾನ ಶಿಬಿರದ ರೂವಾರಿ ಜಿಲ್ಲಾ ಗೃಹರಕ್ಷಕ ದಳದ ಮುಖ್ಯ ಸಮಾದೇಷ್ಠ ಮುರಳಿಮೋಹನ್ ಚೂಂತಾರು ಮಾತನಾಡಿ ಪಟ್ಟಣಗಳಲ್ಲಿ ರಕ್ತದಾನಗಳು ಸದಾ ನಡೆಯುತ್ತಲೇ ಇರುತ್ತದೆ. ಆದರೆ ಹಳ್ಳಿಗಳು ಹಾಗು ತೀರಾ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ರಕ್ತದಾನದ ಅವಶ್ಯಕತೆ, ಉಪಯೋಗದ ಅರಿವು ಇರುವುದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರಬೇಕು ಎಂದು ಹೇಳಿದರು.
50ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮೀನಾರಾಯಣ ಭಟ್ ಚೂಂತಾರು, ಹವ್ಯಕ ಮಹಾಮಂಡಲ ವಲಯ ಅಧ್ಯಕ್ಷ ಸುರೇಶ್ಚಂದ್ರ ಕಲ್ಮಡ್ಕ, ಕಾರ್ಯದರ್ಶಿ ವೇಣುಗೋಪಾಲ ಕೆದ್ಲ, ಶ್ರೀರಾಮ ದೇವಾಲಯದ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗು ತಂತ್ರಜ್ಞ ಡಾ| ಆಂಟೊನಿ ಉಪಸ್ಥಿತರಿದ್ದರು.
ಬೆಳಾಲು ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…