ಸುಬ್ರಹ್ಮಣ್ಯ:ಮಾನವರಿಗೆ ಭಾವನೆಗಳ ಮಹತ್ವವೇ ತಿಳಿದಿಲ್ಲ. ಇದರಿಂದಾಗಿ ಇಂದು ನಾವು ಬಹಳಷ್ಟೂ ಸಮಸ್ಯೆಗಳಿಗೆ ಒಳಗಾಗುತ್ತಿದ್ದೇವೆ. ಭಾವನೆಗಳೆ ಇಲ್ಲದ ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಮುಖ್ಯ ಶಿಕ್ಷಕ ಯಶವಂತ ರೈ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಮತ್ತು ರೋವರ್ಸ್ ರೇಂಜರ್ಸ್ ಘಟಕದ ಆಶ್ರಯದಲ್ಲಿ ಗುರುವಾರ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ಎನ್‍ಎಸ್‍ಎಸ್ ಘಟಕಾಧಿಕಾರಿ ಪ್ರೊ.ಶಿವಪ್ರಸಾದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.
ರೋವರ್ಸ್ ರೇಂಜರ್ಸ್ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು. ಪ್ರೊ.ರಾಮ್ ಪ್ರಸಾದ್ ವಂದಿಸಿದರು. ಪ್ರಣವ್ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel