ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಜನರ ಪರವಾಗಿ ಕೆಲಸ ಮಾಡಲಿದೆ. ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಜನರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಸ್ ಯಡಪಡಿತ್ತಾಯ ಹೇಳಿದ್ದಾರೆ.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಎಸ್ಎಸ್ ಸಿಡಿಎಫ್ ಮಂಗಳೂರು ಪುರಭವನ ಆಯೋಜಿಸಿರುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಶೋಧ ಕರನಿಂಗ ಬರೆದಿರುವ ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಅವರ ಕರಿತಾದ ಎರಡು ಕೃತಿಗಳ ಲೋಕಾರ್ಪಣೆ ಮಾಡಲಾಯಿತು.
ಅರಿವು ನೀಡುವ ಯಾವುದೇ ಕಾರ್ಯಕ್ರಮಕ್ಕೂ ವಿಶ್ವವಿದ್ಯಾಲಯವು ಬೆಂಬಲಿಗನಾಗಿ ನಿಲ್ಲುತ್ತದೆ. ವಿಶ್ವವಿದ್ಯಾನಿಲಯವನ್ನು ವಿಭಿನ್ನವಾಗಿ ರೂಪಿಸಬೇಕು, ಇತರರಿಗಿಂತ ಭಿನ್ನವಾಗಿ ಕೆಲವಸ ಮಾಡಬೇಕು ಹಾಗೂ ಅದು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂಬುದು ತನ್ನ ಮೂಲ ಆಶಯವಾಗಿದೆ ಎಂದು ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದರು.
ಎಸ್ಎಸ್ ಸಿಡಿಎಫ್ ಸಾಮಾಜಿಕ ಕಾಳಜಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಸಂಸ್ಥೆಯ ಮುಂದಿನ ಕೆಲಸ ಕಾರ್ಯ ಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.
ಲೇಖಕಿ ಡಾ. ಯಶೋಧ ಕರನಿಂಗ, ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗಭೂಮಿ ನಟ ಇಂದುಶೇಖರ್ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಎಸ್ ಸಿಡಿಎಫ್ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಾಗೂ ನೋಟರಿ ಗಂಗಾಧರ್ ಉಳ್ಳಾಲ, ಸಾಮಾಜಿಕ ಕಾರ್ಯಕರ್ತೆ ಬಿ.ಕೆ. ಭಾಗೀರಥಿ ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…