ಜಮ್ಮು-ಕಾಶ್ಮೀರದ ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳ ಅಟ್ಟಹಾಸ | ಬಿಜೆಪಿಯ ನಾಯಕನ ಗುಂಡಿಕ್ಕಿ ಕೊಂದ ಉಗ್ರರು

July 9, 2020
10:12 AM

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳು ಬಿಜೆಪಿಯ ಸ್ಥಳೀಯ ನಾಯಕ ವಾಸೀಂ ಅಹ್ಮದ್ ಬಾರಿ ಮತ್ತು ಅವರ ಕುಟುಂಬ ಸದಸ್ಯರನ್ನು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ವಾಸೀಂ ಜತೆಗೆ ಅವರ ಸೋದರ ಉಮರ್ ಬಾರಿ ಮತ್ತು ತಂದೆ ಬಶೀರ್ ಅಹ್ಮದ್ ಕೂಡ ಹತ್ಯೆಗೀಡಾಗಿದ್ದಾರೆ.

Advertisement
Advertisement

ವಾಸೀಂ ಅಹ್ಮದ್ ಅವರು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬಂಡಿಪೊರದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಮೂವರೂ ತಮ್ಮ ಅಂಗಡಿಯಲ್ಲಿ ಇದ್ದ ವೇಳೆಗೆ ನುಗ್ಗಿದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಈ ಅಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲೇ ಇದೆ.

ವಾಸೀಂ ಸ್ಥಳದಲ್ಲೇ ಸಾವನ್ನಪ್ಪಿದರೆ ತೀವ್ರವಾಗಿ ಗಾಯಗೊಂಡಿದ್ದ ಅವರ ಸೋದರ ಮತ್ತು ತಂದೆ ಬಂಡಿಪೊರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟರು.ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ. ಘಟನೆಯನ್ನು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group