ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರ ಪ್ರದೇಶದಲ್ಲಿ ಉಗ್ರಗಾಮಿಗಳು ಬಿಜೆಪಿಯ ಸ್ಥಳೀಯ ನಾಯಕ ವಾಸೀಂ ಅಹ್ಮದ್ ಬಾರಿ ಮತ್ತು ಅವರ ಕುಟುಂಬ ಸದಸ್ಯರನ್ನು ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ವಾಸೀಂ ಜತೆಗೆ ಅವರ ಸೋದರ ಉಮರ್ ಬಾರಿ ಮತ್ತು ತಂದೆ ಬಶೀರ್ ಅಹ್ಮದ್ ಕೂಡ ಹತ್ಯೆಗೀಡಾಗಿದ್ದಾರೆ.
ವಾಸೀಂ ಅಹ್ಮದ್ ಅವರು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬಂಡಿಪೊರದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಮೂವರೂ ತಮ್ಮ ಅಂಗಡಿಯಲ್ಲಿ ಇದ್ದ ವೇಳೆಗೆ ನುಗ್ಗಿದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಈ ಅಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲೇ ಇದೆ.
ವಾಸೀಂ ಸ್ಥಳದಲ್ಲೇ ಸಾವನ್ನಪ್ಪಿದರೆ ತೀವ್ರವಾಗಿ ಗಾಯಗೊಂಡಿದ್ದ ಅವರ ಸೋದರ ಮತ್ತು ತಂದೆ ಬಂಡಿಪೊರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟರು.ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ. ಘಟನೆಯನ್ನು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…