ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಭೂಗತ ಲೋಕದಲ್ಲಿ ಗುರುತಿಸಿಕೊಂಡು ನಂತರ ಮನಪರಿವರ್ತನೆಯಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ಕನ್ನಡಿಗರಿಗೆ ನೆರವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಇಚ್ಚೆಯಂತೆ ಬಂಟ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಬಿಡದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು ಮುತ್ತಪ್ಪ ರೈ ಅವರ ಹಿರಿಯ ವಿದೇಶದದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಅವರ ಕಿರಿಯ ಮಗ ಎಲ್ಲಾ ಅಂತಿಮ ವಿಧಿವಿಧಾನ ನಡೆಸಲಿದ್ದು ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಮುತ್ತಪ್ಪ ರೈ ಅವರ ಆಪ್ತ ವಲಯ ತಿಳಿಸಿದೆ.
2013 ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…