Advertisement
ಸುದ್ದಿಗಳು

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು : ವಿಶೇಷ ಉಪನ್ಯಾಸ

Share

ಸುಳ್ಯ: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ ಕಥೆಯಿದೆ , ಸ್ವಾತಂತ್ರ್ಯದ ಸಿಹಿಯ ಹಿಂದಿನ ಕಹಿಯನ್ನು ತಿಳಿದುಕೊಳ್ಳಬೇಕು ಮತ್ತು ಸ್ವಾತಂತ್ರ್ಯದ ಸದುಪಯೋಗ ಮುಖ್ಯ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ.ಪೂ‌.ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯರು ಮಾತನಾಡಿ ಇತಿಹಾಸವನ್ನು ಏಕಮುಖವಾಗಿ ನೋಡುವುದಲ್ಲ , ಈ ನೆಲದ ಅಂತರಾಳದ ನೋವನ್ನು ತಿಳಿದುಕೊಳ್ಳಬೇಕು , ಇತಿಹಾಸದ ದುರಂತ ಮನುಕುಲಕ್ಕೆ ಪಾಠವಾಗಬೇಕು ಮತ್ತು ಹೊರಜಗತ್ತಿನ ಸಂಘರ್ಷಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮಾನವಿಕ ಸಂಘದ ನಿರ್ದೇಶಕಿ ಉಪನ್ಯಾಸಕಿ ರೇಷ್ಮಾ, ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು.

ಇತಿಹಾಸ ಉಪನ್ಯಾಸಕರಾದ ಹರೀಶ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮಣ್ ಏನೆಕಲ್ ಅವರು ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಅತಿಥಿಗಳೊಡನೆ ಸಂವಾದ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

9 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

9 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

23 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago