ಸುಳ್ಯ: ಸುಳ್ಯ ತಾಲೂಕಿನ ಹಿರಿಯ ಸಹಕಾರಿ, ಸಾಮಾಜಿಕ ರಾಜಕೀಯ ಧುರೀಣ ಜಾಕೆ ಮಾಧವ ಗೌಡರಿಗೆ 70 ಸಂವತ್ಸರಗಳು ತುಂಬಿದ ಹಿನ್ನಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನ.16 ರಂದು ಪಂಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಳ್ಯ ಭಾಗದ ಅಭಿಮಾನಿಗಳು ಪೂರ್ತಿಯಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಲು, ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಆಮಂತ್ರಣ ಪತ್ರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಮುಖ
ನವೆಂಬರ್ 16 ರಂದು ಸಂಜೆ ಪಂಜ ಸೊಸೈಟಿ ಬಳಿಯಿಂದ ಮೆರವಣಿಗೆ ನಡೆಯಲಿದೆ. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಗುವುದು. ಸಮಾರಂಭದಲ್ಲಿ ಜಯಪ್ರಕಾಶ್ ಹೆಗ್ಡೆ, ಡಾ. ಮೋಹನ್ ಆಳ್ವ, ಡಾ.ಎಂ.ಎನ್.ರಾಜೇಂದ್ರಕುಮಾರ್, ಡಾ.ಪುರುಷೋತ್ತಮ ಬಿಳಿಮಲೆ, ಶಾಸಕ ಎಸ್.ಅಂಗಾರ, ಡಾ.ಕೆ.ವಿ.ಚಿದಾನಂದ ಮೊದಲಾದ ಗಣ್ಯರನ್ನು ಆಹ್ವಾನಿಸಲಾಗುತ್ತದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…