ಸುಳ್ಯ: ಸುಳ್ಯದ ಹಿರಿಯ ಸಹಕಾರಿ ಜಾಕೆ ಮಾಧವ ಗೌಡರಿಗೆ 7೦ ವರ್ಷ ತುಂಬಿದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ನಡೆಸುತ್ತಿರುವ ಜಾಕೆ ಸಪ್ತತಿ ಸಂಭ್ರಮ ಕಾರ್ಯಕ್ರಮದಲ್ಲಿ ಬಿಡುಗಡೆಗೊಳ್ಳಲಿರುವ ಸಾಕ್ಷ್ಯಚಿತ್ರದ ನಿರ್ಮಾಣ ಕಾರ್ಯಕ್ಕೆ ಜಾಕೆಯವರ ಮನೆಯಲ್ಲಿ ಚಾಲನೆ ನೀಡಲಾಯಿತು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಿದರು. ಸಾಕ್ಷ್ಯಚಿತ್ರದ ನಿರ್ದೇಶಕ ದುರ್ಗಾಕುಮಾರ್ ನಾಯರ್‌ಕೆರೆ ಪ್ರಸ್ತಾವನೆಗೈದರು. ಜಾಕೆ ಅಭಿನಂದನಾ ಸಮಿತಿಯ ಕಾರ್ಯದರ್ಶಿ ಶಶಿಧರ ಪಳಂಗಾಯ ಸ್ವಾಗತಿಸಿ, ವಂದಿಸಿದರು. ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ, ಪದಾಧಿಕಾರಿಗಳಾದ ಬಾಲಕೃಷ್ಣ ಗೌಡ ಮೂಲೆಮನೆ, ಸಂತೋಷ್ ಜಾಕೆ, ಗಣೇಶ್ ಭೀಮಗುಳಿ, ವೆಂಕಪ್ಪ ಬೆಳಗಜೆ, ಗುತ್ತಿಗಾರು ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಬಾಲಕೃಷ್ಣ, ಲೀಲಾ ಮಾಧವ ಗೌಡ ಜಾಕೆ, ವಿಶ್ವೇಶ್ ಜಾಕೆ ಹಾಗೂ ಜಾಕೆಯವರ ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…