ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಪ್ರಕಾರ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.
Advertisement
ಇತ್ತೀಚಿನ ವರದಿಗಳಂತೆ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಎಜೆಎಸ್ ಯು ಪಕ್ಷ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜೆವಿಎಂ 3 ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Advertisement
ಜಾರ್ಖಂಡ್ ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ಅಖಿಲ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್ಯು) ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement