ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿಗೆ ತೀವ್ರ ಮುಖಭಂಗ, ಸ್ಪಷ್ಟ ಬಹುಮತದತ್ತ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ

December 23, 2019
11:59 AM

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ.

ಜಾರ್ಖಂಡ್ ನಲ್ಲಿ ಆಡಳಿತಾ ರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, 81 ಕ್ಷೇತ್ರಗಳ ಪೈಕಿ ಬಿಜೆಪಿ ಕೇವಲ 28 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದು ಕೊಂಡಿದೆ. ಆದರೆ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈಗಗಾಲೇ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕಿದೆ.

ಉಳಿದಂತೆ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಎಜೆಎಸ್ ಯು ಪಕ್ಷ 6, ಜೆವಿಎಂ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 81 ಸದಸ್ಯ ಬಲದ ಜಾರ್ಖಂಡ್ ನಲ್ಲಿ ಸರ್ಕಾರ ರಚನೆಗೆ 41 ಸದಸ್ಯ ಬಲದ ಅಗತ್ಯವಿದೆ. ಹೀಗಾಗಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈ ಬಾರಿ ಸರ್ಕಾರ ರಚನೆ ಮಾಡುವುದು ಬಹುತೇಕ ನಿಚ್ಚಳವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror