ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ ಸಮಾನತೆಯ ಶಿಕ್ಷಣ ಕಟ್ಟಕಡೆಯ ವ್ಯಕ್ತಿಗೂ ದೊರೆಯುತ್ತದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣದ ಕಡೆಯೂ ಗಮನ ಹರಿಸುವ ಕೆಲಸ ಸರಕಾರ ಮಟ್ಟದಲ್ಲಿ ಆಗಬೇಕು ಎಂದರು.
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ, ಉಪಾಧ್ಯಕ್ಷ ಇಬ್ರಾಹಿಂ ಕತ್ತರ್, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಸದಸ್ಯರುಗಳಾದ ಜನಾರ್ದನ ಆಚಾರ್ಯ, ರುಕ್ಮಿಣಿ ನಾರಾಯಣ ಗೌಡ ಕದಿಕಡ್ಕ, ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಸ್ವಾಗತಿಸಿ, ಪ್ರೌಢಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ರೈ ಜಾಲ್ಸೂರು ಹಾಗೂ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಮರಸಂಕ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಜಾಕೆ ಸದಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಲ್ಸೂರು ಗ್ರಾ.ಪಂ.ವತಿಯಿಂದ ನಿರ್ಮಾಣವಾದ ಶಾಲಾ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಆಡಳಿತ ಮಂಡಳಿ ಖಜಾಂಜಿ ಶ್ರೀನಿವಾಸ ಭಟ್ ಅವರು ಕೊಡುಗೆಯಾಗಿ ನೀಡಿದ್ದ ಗೇಟ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಂಕ್ರೀಟ್ ರಸ್ತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್ ಉದ್ಘಾಟಿಸಿದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…