ಸುಳ್ಯ: ಜಾಲ್ಸೂರು ಗ್ರಾಮದ ಮುರೂರು ಬಳಿ ಇನೋವಾ ಕಾರೊಂದು ಬೈಕ್‍ಗೆ ಢಿಕ್ಕಿ ಹೊಡೆದು ಬೈಕ್ ಚಲಾಯಿಸುತ್ತಿದ್ದ ವೃದ್ದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮುರೂರಿನ ಬಾಬು ನಾಯರ್ (56) ಮೃತಪಟ್ಟ ವ್ಯಕ್ತಿ. ಸುಳ್ಯದಲ್ಲಿ ನಡೆದ ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿ ಪತ್ನಿ ಜತೆಗೆ ಮನೆಗೆ ತೆರಳುತ್ತಿದ್ದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನೋವಾ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಬಾಬು ನಾಯರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‍ನ ಹಿಂಬದಿ ಕುಳಿತಿದ್ದ ಪತ್ನಿ ಶೈಲಜಾ ಗಾಯಗೊಂಡಿದ್ದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…