ಮಂಗಳೂರು: ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಗೆ ಸಾರ್ವಜನಿಕರು ಸಂಪರ್ಕಿಸಿ. ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳಿ. ಯಾವುದೇ ಭಯ, ಆತಂಕ ಬೇಡ. ಇದು ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಎಂದು ಜಿಲ್ಲಾದಿಕಾರಿ ಸಿಂಧೂ ಬಿ ರೂಪೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಯಾರೇ ಆಗಲು ತಾವು ವಿದೇಶ ಪ್ರಯಾಣ ಮಾಡಿದ್ದಲ್ಲಿ ಅಥವಾ ತಮಗೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಸಂಪರ್ಕಿಸಲು ಕೋರಲಾಗಿರುತ್ತದೆ. ಕೋವಿಡ್ ಪರೀಕ್ಷೆಗೊಳಪಡಿಸುವ ಅಥವಾ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ. ಖಾಸಗೀ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿ ನೀಡಲು ಕೋರಲಾಗಿರುತ್ತದೆ. ಆದಾಗ್ಯೂ ಸಹ, ಕೆಲವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡುಬರುವುದಿಲ್ಲ.
ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ ಮಾಹಿತಿಯನ್ನು ನೀಡುವುದು ಸೂಕ್ತವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ, ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ವಿನಂತಿಸುತ್ತೇವೆ ಎಂದು ಜಿಲ್ಲಾದಿಕಾರಿಗಳು ಮನವಿ ಮಾಡಿದ್ದಾರೆ.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…