ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ : ಮೊಬೈಲ್‌ನಲ್ಲಿ ಕಾಲಹರಣ ಮಾಡಬೇಡಿ : ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ರಾಧಾ ಸಲಹೆ

November 6, 2019
3:33 PM

ಮಡಿಕೇರಿ: ಜಿಲ್ಲಾ ಬಾಲಭವನ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ‘’ಕಲಾಶ್ರೀ’’ ಆಯ್ಕೆ ಶಿಬಿರವು ಮಂಗಳವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಿತು.

Advertisement
Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರಾಧ ಅವರು ಮಾತನಾಡಿ ಪ್ರತಿಭೆ ಹೊರ ಸೂಸುವಂತಹ ಕಾರ್ಯಕ್ರಮ. ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬಾಲ ಭವನ ಸೊಸೈಟಿಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿದೆ ಎಂದರು.  ಮಕ್ಕಳು ಹೆಚ್ಚಿನ ದೈಹಿಕ ಶ್ರಮವಿಲ್ಲದೆ ಸಮಯವನ್ನು ಟಿ.ವಿ, ಮೊಬೈಲ್, ಹಾಗೂ ಕಂಪ್ಯೂಟರ್‌ಗಳನ್ನು ಉಪಯೋಗಿಸುತ್ತ ವ್ಯರ್ಥ ಮಾಡುತ್ತಿದ್ದಾರೆ. ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಅಂಕವನ್ನು ತೆಗೆಯಲು ಒತ್ತಡವನ್ನು ಹೇರುವುದರಿಂದ ಖಿನ್ನತೆಗೆ ಒಳಗಾಗುತ್ತಾರೆ. ಅಂಕಗಳನ್ನು ಮಾತ್ರ ಪರಿಗಣಿಸದೆ ಅವರ ಪ್ರತಿಭೆಯನ್ನು ಪೋಷಿಸಿ ಬೆಳೆಸಬೇಕು. ಬಾಲಕಾರ್ಮಿಕ ಮಕ್ಕಳು, ಅನಾಥ ಮಕ್ಕಳು, ಏಕ ಪೋಷಕ ಮಕ್ಕಳು, ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶೋಷಣೆಗೆ ಒಳಗಾದಂತಹ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.

ಸೃಜನಾತ್ಮಕ ಕಲೆ, ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ, ಶೃಜನತ್ಮಾಕ ಬರವಣಿಗೆ, ಕಥೆ- ಕೊಡಗಿನಲ್ಲಾದ ಪ್ರಕೃತಿ ವಿಕೋಪ ನಂತರದ ಚಿತ್ರಣ ಅಥವಾ ಕೊಡಗಿನಲ್ಲಾದ ಪ್ರಕೃತಿ ವಿಕೋಪದ ಚಿತ್ರಣ, ಕವನ, ಕೊಡಗಿನ ವೀರ ಯೋಧ, ಪ್ರಬಂಧ – ಸೃಜನಾತ್ಮಕ ಕಲೆ ಬೆಳೆಸುವುದರಲ್ಲಿ ವಿದ್ಯಾರ್ಥಿಗಳ ಪಾತ್ರ, ಸೃಜನತ್ಮಾಕ ಪ್ರದರ್ಶನ ಕಲೆ, ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಶಾಸ್ತ್ರೀಯ ಗಾಯನ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷ ಪ್ರದರ್ಶನ, ಸುಗಮ ಸಂಗೀತ, ಯೋಗ, ನೃತ್ಯ, ಏಕ ಪಾತ್ರಾಭಿನಯ, ವಿಜ್ಞಾನದಲ್ಲಿ ನೂತನ ಆವಿಷ್ಕಾರಗಳನ್ನು ಕಾರ್ಯಕ್ರಮ ಒಳಗೊಂಡಿತ್ತು.

Advertisement

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಮಂಜುಳ ಮತ್ತು ಕೋಮಲ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಜಿಲ್ಲಾ ಸಂಯೋಜಕರಾದ ಪ್ರಭಾವತಿ, ತೀರ್ಪುಗಾರರಾದ ಪ್ರಸನ್ನ, ಭರತ್ ಕೋಡಿ, ದಿಲೀಪ್ ಕುಮಾರ್, ಭಾರತಿ ರಮೇಶ್, ಗೌರಮ್ಮ ಮತ್ತು ಇತರರು ಪಾಲ್ಗೊಂಡಿದ್ದರು.

ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ 2019ರಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರಕ್ಕೆ ಆಯ್ಕೆಯಾದ ಮಕ್ಕಳ ವಿವರ ಇಂತಿದೆ. ಸೃಜನಾತ್ಮಕ ಕಲೆಯಲ್ಲಿ ಮಡಿಕೇರಿ ಸಂತ ಜೋಸೆಫರ ಶಾಲೆಯ ಮಿಥಿಲ ಟಿ.ಎಂ., ಹಾಗೂ ಕೊಡಗು ವಿದ್ಯಾಲಯ, ಭಾರತೀಯ ವಿದ್ಯಾಭವನದ ಲಕ್ಷ್ಯ ಪಿ. ಎನ್., ಸೃಜನಾತ್ಮಕ ಬರವಣಿಗೆಯಲ್ಲಿ ಮಡಿಕೇರಿ ಸಂತ ಜೋಸೆಫರ ಪ್ರೌಢಶಾಲೆಯ ಅನನ್ಯ ಎಂ.ಹೆಚ್. ಹಾಗೂ ಸೋಮವಾರಪೇಟೆ ಸಂತ ಜೋಸೆಫರ ಪ್ರೌಢಶಾಲೆಯ ದರ್ಶನ್ ಬಿ. ಎಂ., ವಿಜ್ಞಾನದಲ್ಲಿ ನೂತನ ಆವಿಷ್ಕಾರದಲ್ಲಿ ಜನರಲ್ ತಿಮ್ಮಯ್ಯ ಶಾಲೆಯ ಶ್ರೀದೇವಿ, ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ಲಿಖಿತ್., ಸೃಜನಾತ್ಮಕ ಕಲೆ ಮತ್ತು ಪ್ರದರ್ಶನದಲ್ಲಿ ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಶಾಲೆಯ ಆಯುಷ್ ಎಂ. ಡಿ., ಮಡಿಕೇರಿ ಸಂತ ಜೋಸೆಫರ್ ಶಾಲೆಯ ಮೇನಿತಾ ನಾಗೇಶ್ ಅವರು ಆಯ್ಕೆಯಾಗಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
May 29, 2025
7:12 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group