ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 12 ದಿನಗಳಿಂದ ದ ಕ ಜಿಲ್ಲೆ ಸುರಕ್ಷತೆಯ ಹಾದಿಯಲ್ಲಿದೆ.
ಇಲ್ಲಿಯವರೆಗೆ 682 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಈ ಪೈಕಿ 611 ಮಂದಿಯ ವರದಿ ನೆಗೆಟಿವ್ ಬಂದಿದೆ. ಗುರುವಾರದಂದು 24 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ 15 ಮಂದಿ ಬಿಡುಗಡೆ ಮಾಡಲಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಕೂಡಾ ಗುರುವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ.
ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಒಂದು ಪ್ರಕರಣ ಪತ್ತೆಯಾಗಿದೆ. ಕೇರಳದಲ್ಲಿ ಒಟ್ಟು 7 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಗುರುವಾರ ಒಟ್ಟು 36 ಹೊಸ ಪ್ರಕರಣ ದಾಖಲಾಗುವ ಮೂಲಕ ಒಟ್ಟು 315 ಕೊರೊನಾ ವೈರಸ್ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 82 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…