ಸುಳ್ಯ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ ಒಂದರಂದು ಮಂಗಳೂರಿನ ಪುರಭವನದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯಲಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದ್ದಾರೆ.
ಜಿಲ್ಲಾ ಸಮ್ಮೇಳನದ ಸಿದ್ಧತೆಯ ಬಗ್ಗೆ ಚರ್ಚಿಸಲು ಸುಳ್ಯ ಪ್ರೆಸ್ ಕ್ಲಬ್ ಗೆ ಆಗಮಿಸಿದ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.
ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆಯಲ್ಲಿ ದಿನಪೂರ್ತಿ ನಡೆಯುವ ಸಮ್ಮೇಳನವನ್ನು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಉದ್ಘಾಟಿಸುವರು. ಸಚಿವರಾದ ಯು.ಟಿ.ಖಾದರ್, ಜಯಮಾಲಾ ಸೇರಿದಂತೆ ಜನಪ್ರತಿನಿಧಿಗಳು, ಹಿರಿಯ ಪತ್ರಕರ್ತರು ಭಾಗವಹಸಿಲಿದ್ದಾರೆ. ಉದ್ಘಾಟನೆಯ ಬಳಿಕ ಪತ್ರಿಕೋದ್ಯಮ ಕುರಿತ ವಿವಿಧ ವಿಚಾರಗೋಷ್ಠಿ ನಡೆಯಲಿದೆ. ರಾಜ್ಯದ ಹಿರಿಯ ಪತ್ರಕರ್ತರು ವಿಚಾರ ಮಂಡಿಸುವರು. ಬಳಿಕ ಬ್ರಾಂಡ್ ಮಂಗಳೂರು ಕುರಿತು ಪತ್ರಿಕೆ ಮತ್ತು ಟಿ.ವಿ ಸಂಸ್ಥೆಗಳ ಜಿಲ್ಲಾ ಮುಖ್ಯಸ್ಥರೊಂದಿಗೆ ಸಂವಾದ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ 30 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಗುವುದು.
ಸಮ್ಮೇಳನದ ನೆನಪಿಗಾಗಿ ‘ಸಮಾಚಾರ’ ಎಂಬ ಸ್ಮರಣ ಸಂಚಿಕೆಯನ್ನು ಹೊರ ತರಲಾಗುವುದು ಎಂದು ವಿವರಿಸಿದರು.
ಸಮ್ಮೇಳನದ ಸಂಚಾಲಕ ಹಾಗು ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪತ್ರಕರ್ತರ ಅದ್ದೂರಿ ಸಮ್ಮೇಳನ ಆಯೋಜಿಸಲಾಗಿದೆ. ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು ಸಮ್ಮೇಳನದ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಎಂದು ವಿನಂತಿಸಿದರು.
ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಮಾತನಾಡಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಹಸೈನಾರ್ ಜಯನಗರ ಸ್ವಾಗತಿಸಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ಸಂಘದ ಕೋಶಾಧಿಕಾರಿ ವಿಶ್ವನಾಥ ಮೋಟುಕಾನ, ಪದ್ಮನಾಭ ಮುಂಡೋಕಜೆ, ಮುರಳೀಧರ ಅಡ್ಡನಪಾರೆ ಮತ್ತಿತರರು ಉಪಸ್ಥಿತರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…