ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…