ಸುಳ್ಯ: 1377ನೇ ಮದ್ಯವರ್ಜನ ಶಿಬಿರ ಜುಲೈ 22 ರಿಂದ 29 ರವರೆಗೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಳಂಜ ವಿಶ್ವನಾಥ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ, ನವಜೀವನ ಸಮಿತಿಗಳು ಬೆಳ್ಳಾರೆ ಆಶ್ರಯದಲ್ಲಿ ಶಿಬಿರ ನಡೆಯಲಿದೆ.
ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ ಉದ್ಘಾಟಿಸುವರು. ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ವಿಶ್ವನಾಥ ರೈ ಕಳಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯೆ ರಾಜೀವಿ ಆರ್ ರೈ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ, ತಾ.ಪಂ. ಸದಸ್ಯೆ ನಳಿನಾಕ್ಷಿ, ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ಬೆಳ್ಳಾರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ, ಜನ ಜಾಗೃತಿ ವೇದಿಕೆ ಬೆಳ್ಳಾರೆ ವಲಯ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ಭಾಗವಹಿಸಲಿದ್ದಾರೆ.
ಜು.29 ರಂದು ತಾಲೂಕು ಜನಜಾಗೃತಿ ವೇದಿಕೆ ಅಧಿಕಾರ ಹಸ್ತಾಂತರ ಹಾಗೂ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಸುಳ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್. ಅಂಗಾರ, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಉಡುಪಿ ಇದರ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ ಇದರ ಅಧ್ಯಕ್ಷ ಎನ್.ಎ. ರಾಮಚಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ, ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ಎಂ. ಬಿ. ಸದಾಶಿವ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್, ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ಮತ್ತಿತರರು ಭಾಗವಹಿಸಲಿದ್ದಾರೆ.
ಮದ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಸಲಹಾ ಸಮಿತಿ ಸದಸ್ಯ ಎನ್.ಎ.ರಾಮಚಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಯೋಜನಾಧಿಕಾರಿ ಸಂತೋಷ್‍ಕುಮಾರ್, ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…