Advertisement
ಮಾಹಿತಿ

ಜುಲೈ 22 ರಿಂದ ಬೆಳ್ಳಾರೆಯಲ್ಲಿ ಮದ್ಯವರ್ಜನ ಶಿಬಿರ

Share

ಸುಳ್ಯ: 1377ನೇ ಮದ್ಯವರ್ಜನ ಶಿಬಿರ ಜುಲೈ 22 ರಿಂದ 29 ರವರೆಗೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಳಂಜ ವಿಶ್ವನಾಥ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ, ನವಜೀವನ ಸಮಿತಿಗಳು ಬೆಳ್ಳಾರೆ ಆಶ್ರಯದಲ್ಲಿ ಶಿಬಿರ ನಡೆಯಲಿದೆ.
ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ ಉದ್ಘಾಟಿಸುವರು. ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ವಿಶ್ವನಾಥ ರೈ ಕಳಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಸುಳ್ಯ ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯೆ ರಾಜೀವಿ ಆರ್ ರೈ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ, ತಾ.ಪಂ. ಸದಸ್ಯೆ ನಳಿನಾಕ್ಷಿ, ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ಬೆಳ್ಳಾರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ, ಜನ ಜಾಗೃತಿ ವೇದಿಕೆ ಬೆಳ್ಳಾರೆ ವಲಯ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ಭಾಗವಹಿಸಲಿದ್ದಾರೆ.

Advertisement

ಜು.29 ರಂದು ತಾಲೂಕು ಜನಜಾಗೃತಿ ವೇದಿಕೆ ಅಧಿಕಾರ ಹಸ್ತಾಂತರ ಹಾಗೂ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಸುಳ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕುಮಾರ್  ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್. ಅಂಗಾರ, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಉಡುಪಿ ಇದರ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ ಇದರ ಅಧ್ಯಕ್ಷ ಎನ್.ಎ. ರಾಮಚಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ, ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ಎಂ. ಬಿ. ಸದಾಶಿವ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್, ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ಮತ್ತಿತರರು ಭಾಗವಹಿಸಲಿದ್ದಾರೆ.

ಮದ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಸಲಹಾ ಸಮಿತಿ ಸದಸ್ಯ ಎನ್.ಎ.ರಾಮಚಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಯೋಜನಾಧಿಕಾರಿ ಸಂತೋಷ್‍ಕುಮಾರ್, ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

7 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago