ಮಂಗಳೂರು : ಜುಲೈ 30 ಹಾಗೂ 31 ರವರೆಗೆ ದ.ಕ. ಜಿಲ್ಲೆಯ ಮಂಗಳೂರು ಕಮೀಷನರೇಟ್ ಘಟಕದ ವ್ಯಾಪ್ತಿಯ ಪರೀಕ್ಷಾ ಕೇಂದ್ರ ಸಿಇಟಿ 2020 – ಸಾಮಾನ್ಯ ಪ್ರವೇಶ ಪರೀಕ್ಷೆಗಳು ಹಾಗೂ ಆಗಸ್ಟ್ 1 ರಂದು ಹೊರನಾಡು ಮತ್ತು ಗಡಿನಾಡು ಆಭ್ಯರ್ಥಿಗಳಿಗೆ ಸಿಇಟಿ 2020ರ ಕನ್ನಡ ಭಾಷಾ ಪರೀಕ್ಷಾ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973 ಕಾಯ್ದೆಯ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜ್ಯಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶಿಸಿರುತ್ತಾರೆ.
ನಿಷೇಧಾಜ್ಞೆ ಜಾರಿಯಾದ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಆಭ್ಯರ್ಥಿಗಳ ಹೊರತು ಪಡಿಸಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…