Advertisement
ನಮ್ಮೂರ ಸುದ್ದಿ

ಜು.16: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ

Share

ಸುಬ್ರಹ್ಮಣ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಇದರ ವತಿಯಿಂದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜು.16 ರಂದು ಸುಳ್ಯ ಜ್ಯೋತಿ ಸರ್ಕಲ್ ಬಳಿಯ ಅಮೃತಭವನದಲ್ಲಿ ನಡೆಯಲಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ತಿಳಿಸಿದ್ದಾರೆ.

ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮ ಉದ್ಘಾಟಿಸುವರು. ಮಡಿಕೇರಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶರೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ಅಶ್ರಪ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಕುಂಞ ಅಹಮ್ಮದ್, ಸುಳ್ಯ ವೃತ್ತನಿರೀಕ್ಷ ಸತೀಶ್ ಕುಮಾರ್,  ದ ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಪ್ರೆಸ್‍ಕ್ಲಬ್ ಅಧ್ಯಕ್ಷ ಜೆ.ಕೆ ರೈ ಭಾಗವಹಿಸಲಿರುವರು. ಸುದ್ದಿ ಸಮೂಹ ಸಂಸ್ಥೆಗಳ ಸಂಪಾದಕ ಡಾ.ಯು.ಪಿ ಶಿವಾನಂದ  ಸನ್ಮಾನ ನೆರವೇರಿಸುವರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಮಾತುಗಳನ್ನಾಡುವರು ಎಂದು ಅವರು ತಿಳಿಸಿದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಹಿಮಕರ ಕೆ,ಎಸ್, ರೆಡ್‍ಕ್ರಾಸ್ ಪುರಸ್ಕೃತ  ಪಿ.ಬಿ ಸುಧಾಕರ ರೈ, ಪತ್ರಕರ್ತ ರವಿರಾಜ ವಳಲಂಬೆ, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ ಹಾಗೂ ನಿರಂತರ ಗ್ರಾಮ ಸ್ವಚ್ಛತೆಗೆ ಶ್ರಮದಾನ ನಡೆಸುತ್ತಿರುವ ಶ್ರೀ ಮಹಾತ್ಮಗಾಂಧಿ ಸೇವಾ ಸಂಘ ಮಡಪ್ಪಾಡಿ ತಂಡವನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

50 minutes ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

7 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

8 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

9 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

10 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

11 hours ago