ಬೆಂಗಳೂರು: ಶ್ರೀರಾಮಚಂದ್ರಾಪುರ ಮಠಾಧೀಶ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರ 26ನೇ ಚಾತುರ್ಮಾಸ ಬೆಂಗಳೂರಿನ ಗಿರಿನಗರದಲ್ಲಿರುವ ರಾಮಾಶ್ರಮ ಆವರಣದಲ್ಲಿ ಜು.16 ರಿಂದ ನಡೆಯಲಿದೆ.
ಚಾತುರ್ಮಾಸ್ಯ ಅಂಗವಾಗಿ ಸೋಮವಾರ ಮಧ್ಯಾಹ್ನ ಪುರಪ್ರವೇಶ ಅದ್ದೂರಿಯಿಂದ ನೆರವೇರಿತು. ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಭಟ್ ಬೇರ್ಕಡವು, ಚಾತುರ್ಮಾಸ್ಯ ಕ್ರಿಯಾಸಮಿತಿ ಅಧ್ಯಕ್ಷ ರಮೇಶ್ ಹೆಗಡೆ ಕೋರಮಂಗಲ, ಕಾರ್ಯದರ್ಶಿ ವಾದಿರಾಜ ಸಾಮಗ, ರಾಮಾಯಣ ಕ್ರಿಯಾಸಮಿತಿ ಅಧ್ಯಕ್ಷ ಶಾರದಾ ಜಯಗೋವಿಂದ್, ಕೆಕ್ಕಾರ್ ರಾಮಚಂದ್ರ ಭಟ್ ಹಾಗೂ ಶ್ರೀಮಠದ ಅಪಾರ ಶಿಷ್ಯ ಭಕ್ತರು ಈ ಸಂದರ್ಭದಲ್ಲಿ ಹಾಜರಿದ್ದು ಪುರಪ್ರವೇಶ ಮಾಡಿದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರಮಾಡಿಕೊಂಡರು.
ಮಂಗಳವಾರ ಚಾತುರ್ಮಾಸ್ಯ ವ್ರತಾರಂಭದ ಅಂಗವಾಗಿ ಬೆಳಿಗ್ಗೆ ಶ್ರೀಕರಾರ್ಚಿತ ಪೂಜೆಯ ಬಳಿಕ ಶ್ರೀವ್ಯಾಸಪೂಜೆ ಮತ್ತು ಗುರುಪರಂಪರೆಯ ವಿಶೇಷ ಪೂಜೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಅನ್ನರಾಶಿ ಪೂಜೆ, ಪುನರ್ವಸು ಲೋಕಾರ್ಪಣೆ, ಮಧ್ಯಾಹ್ನ 2ಕ್ಕೆ ಚಾತುರ್ಮಾಸ್ಯ ಸಭೆ ಮತ್ತು ನೂತನ ಶಾಸನತಂತ್ರದ ಘೋಷಣೆ ನಡೆಯಲಿದೆ.
ಜುಲೈ 16ರಂದು ಆರಂಭವಾಗುವ ಚಾತುರ್ಮಾಸ ಸೆಪ್ಟೆಂಬರ್ 14ರಂದು ಸಂಪನ್ನವಾಗಲಿದ್ದು, ಈ ಬಾರಿಯ ಚಾತುರ್ಮಾಸಕ್ಕೆ ರಾಮಾಯಣ ಚಾತುರ್ಮಾಸ ಎಂದು ಹೆಸರಿಸಲಾಗಿದೆ. ಸೆಪ್ಟೆಂಬರ್ 14 ರಂದು ಶನಿವಾರ ಸೀಮೋಲ್ಲಂಘನ ನಡೆಯಲಿದೆ ಎಂದು ಚಾತುರ್ಮಾಸ್ಯ ಕ್ರಿಯಾಸಮಿತಿ ಅಧ್ಯಕ್ಷ ರಮೇಶ್ ಕೋರಮಂಗಲ ಮತ್ತು ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಾತುರ್ಮಾಸ್ಯದಲ್ಲಿ ಜುಲೈ 16ರಂದು ಪುನರ್ವಸು ಭವನ ಲೋಕಾರ್ಪಣೆ, 19ರಂದು ಶ್ರೀಗಳ ವರ್ಧಂತಿ, 23ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆಪ್ಟೆಂಬರ್ 2ರಂದು ಗಣೇಶ ಚತುರ್ಥಿ ನಡೆಯಲಿದೆ. 14ರಂದು ಸೀಮೋಲ್ಲಂಘನೆಯ ದಿನ ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶ್ರೀಗಳು ಸನ್ಯಾಸ ಸ್ವೀಕರಿಸಿ 25 ವರ್ಷಗಳನ್ನು ಪೂರೈಸಿದ್ದು, ಈ ಬಾರಿ 26ನೇ ವರ್ಷದ ಚಾತುರ್ಮಾಸವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಪ್ರತಿ ದಿನ ಶ್ರೀಗಳಿಂದ ಧಾರಾ ರಾಮಾಯಣ ಪ್ರವಚನ ಇರುತ್ತದೆ ಎಂದು ಮಾಧ್ಯಮ ಶ್ರೀಸಂಯೋಜಕ ಉದಯಶಂಕರ್ ಭಟ್ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…