Advertisement
ಸುದ್ದಿಗಳು

ಜು.25-27 : ವಿವೇಕಾನಂದದಲ್ಲಿ 40 ನೇ ಮಾನ್ಸೂನ್‍ ಚೆಸ್ ಪಂದ್ಯಾಟ

Share

ಪುತ್ತೂರು : ವಿವೇಕಾನಂದ ಕಾಲೇಜು  ಪುತ್ತೂರು ಇದರ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ 40 ನೇ ಮಾನ್‍ಸೂನ್‍ಚೆಸ್ ಪಂದ್ಯಾಟವು ಜುಲೈ25, 26 ಮತ್ತು27, 2019ರಂದುಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ದಕ್ಷಿಣಕನ್ನಡ, ಉಡುಪಿ ಮತ್ತುಕೊಡಗುಜಿಲ್ಲೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ಪದವಿ ಕಾಲೇಜು, ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದರಲ್ಲಿ ಭಾಗವಹಿಸಲು ಅವಕಾಶವಿದೆ. ಪಂದ್ಯಾಟವನ್ನುಮಾನ್ಸೂನ್‍ ಚೆಸ್‍ನ ಮೂರನೇ ಆವೃತ್ತಿಯ ವಿಜೇತರು  ರತ್ನವರ್ಮ  ಇವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಜೆರಾಲ್ಡ್ ಸಂತೋಷ್‍ಡಿಸೋಜ ಇವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ  ಶ್ರೀನಿವಾಸ್ ಪೈ.ವಹಿಸುವರು. ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಸಂಚಾಲಕರಾದ ಜಯರಾಮ್ ಭಟ್‍ಎಂ.ಟಿ ಮತ್ತು ಮುಖ್ಯತೀರ್ಪುಗಾರರಾದ ಪ್ರಸನ್ನರಾವ್. ಮಂಗಳೂರು ಇವರು ಉಪಸ್ಥಿತರಿರುವರು.

ಬಹುಮಾನ ವಿತರಣೆಯನ್ನು ಮಾನ್ಸೂನ್‍ ಚೆಸ್‍ನ ಹ್ಯಾಟ್ರಿಕ್ ವಿಜೇತ ಡೆರಿಕ್ ಪಿಂಟೋ ಇವರು ಮಾಡಲಿದ್ದಾರೆ.ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲರಾದಡಾ.ಪೀಟರ್ ವಿಲ್ಸನ್ ಪ್ರಭಾಕರ್ ಇವರು ವಹಿಸಲಿರುವರು.

ಜುಲೈ 25ರಂದು ಪೂರ್ವಾಹ್ನ 10.00 ಘಂಟೆಗೆ ಪಂದ್ಯಾಟವು ಆರಂಭಗೊಳ್ಳಲಿದ್ದು, ಸ್ವಿಸ್ ಮಾದರಿಯಲ್ಲಿ ನಡೆಯುತ್ತದೆ.ಭಾಗವಹಿಸುವವರು ಚೆಸ್ ಬೋರ್ಡ್ ಮತ್ತುಚೆಸ್ ದಾಳವನ್ನು ಸ್ವತಃತರಬೇಕು ಹಾಗೂ ಪ್ರಾಂಶುಪಾಲರ ಸಹಿ ಇರುವಗುರುತಿನ ಪತ್ರವನ್ನು ಹೊಂದಿರಬೇಕು.
ಪಂದ್ಯಾಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಪ್ರವೇಶಪತ್ರ ಮತ್ತು ಶುಲ್ಕ ರೂ 50.00 ನ್ನು ಪ್ರಾಂಶುಪಾಲರು, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ನೆಹರು ನಗರ, ಪುತ್ತೂರು ದ.ಕ-574203 ಇವರಿಗೆ ಪಾವತಿಸಬೇಕು.

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ವಿಜೇತರಿಗೆ ಶಾಶ್ವತ ಫಲಕ ಮತ್ತುಉತ್ತಮ 10 ಮಂದಿ ಆಟಗಾರರಿಗೆ ಪ್ರಮಾಣಪತ್ರದೊಂದಿಗೆ ಸ್ಮರಣಿಕೆ ನೀಡಲಾಗುತ್ತದೆ.ಎಲ್ಲಾಆಟಗಾರರಿಗೆ ಭಾಗವಹಿಸಿದ ಪ್ರಮಾಣ ಪತ್ರ ನೀಡಲಾಗುತ್ತದೆ.

ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಜುಲೈ 23 ದಿನಾಂಕದ ಮೊದಲುತಮ್ಮ ಪ್ರವೇಶವನ್ನು ನೊಂದಾಯಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಗಾಗಿದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ.ಎಸ್‍ ಇವರನ್ನು ಸಂಪರ್ಕಿಸಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

16 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

20 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago