ಜು.3: ಗೋರಕ್ಷಣೆ ಆಗ್ರಹಿಸಿ ಪ್ರತಿಭಟನೆ

July 2, 2019
9:59 PM

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಜು.3 ರಂದು  ಬುಧವಾರ ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ 12 ರ ತನಕ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಪ್ರಕಟಣೆ ತಿಳಿಸಿದೆ. ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ.

Advertisement

ಪ್ರತಿಭಟನೆಗೆ ಬೆಂಬಲ- ಅಂಗಾರ

ವಿಹಿಂಪ ಮತ್ತು ಭಜರಂಗ ದಳ ನಡೆಸುವ ಪ್ರತಿಭಟನೆಗೆ ಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಸಾಗಿದೆ. ಇದು ಜಿಲ್ಲೆಯ ಶಾಂತಿ ಕದಡಲು ಕಾರಣವಾಗುತಿದೆ. ಇದರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಗೋಕಳ್ಳ ಸಾಗಾಟ ಮತ್ತು ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು. ಅಕ್ರಮ ಗೋ ಸಾಗಾಟ ತಡೆಯದೇ ಇದ್ದರೆ ಮುಂದೆ ಉಂಟಾಗುವ ಎಲ್ಲಾ ಸಮಸ್ಯೆಗಳಿಗೂ ಸರಕಾರವೇ ಹೊಣೆಯಾಗಿರುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು
July 10, 2025
10:42 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ
July 10, 2025
10:27 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.
July 10, 2025
10:11 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group