ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಜು.3 ರಂದು ಬುಧವಾರ ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ 12 ರ ತನಕ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಪ್ರಕಟಣೆ ತಿಳಿಸಿದೆ. ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಗೆ ಬೆಂಬಲ- ಅಂಗಾರ
ವಿಹಿಂಪ ಮತ್ತು ಭಜರಂಗ ದಳ ನಡೆಸುವ ಪ್ರತಿಭಟನೆಗೆ ಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಸಾಗಿದೆ. ಇದು ಜಿಲ್ಲೆಯ ಶಾಂತಿ ಕದಡಲು ಕಾರಣವಾಗುತಿದೆ. ಇದರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಗೋಕಳ್ಳ ಸಾಗಾಟ ಮತ್ತು ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು. ಅಕ್ರಮ ಗೋ ಸಾಗಾಟ ತಡೆಯದೇ ಇದ್ದರೆ ಮುಂದೆ ಉಂಟಾಗುವ ಎಲ್ಲಾ ಸಮಸ್ಯೆಗಳಿಗೂ ಸರಕಾರವೇ ಹೊಣೆಯಾಗಿರುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…