ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ .ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ ಪುತ್ತೂರು ಇದರ ಆಡಳಿತಾಧಿಕಾರಿ ಡಾ । ಸುಂದರ್ ಕೇನಾಜೆ ಉಪನ್ಯಾಸ ನೀಡಲಿದ್ದಾರೆ. ಪತ್ರಿಕಾ ಕ್ಷೇತ್ರದ ಸೇವೆಗಾಗಿ ಶಂಕರ ಪೆರಾಜೆ ಇವರನ್ನು ಸನ್ಮಾನ ನಡೆಯಲಿದೆ. ಪೊಲೀಸ್ ಉಪನಿರೀಕ್ಷಕ ಹರೀಶ್ ಕುಮಾರ್ ಎಂ.ಆರ್. ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ , ಲೋಕೇಶ್ ಪೆರ್ಲಂಪಾಡಿ ಉಪಸ್ಥಿತರಿರುವರು ಎಂದು ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…