ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ನೀಡಲಾಗಿತ್ತು. ಇದೀಗ ದಿಢೀರ್ ರದ್ದಾಗಿದ್ದು ಜು. 18 ಕ್ಕೆ ಮುಂದೂಡಲಾಗಿದೆ.
ಮೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಮಳೆಗಾಲದ ತುರ್ತು ಕೆಲಸದ ನಿಮಿತ್ತ ಸಭೆ ರದ್ದು ಪಡಿಸಿ ದಿನಾಂಕ ಬದಲಾಯಿಸಿ ಸಭೆ ಮುಂದೂಡಲಾಗಿದೆ.
ಸಭೆ ಮುಂದೂಡಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳು ಹಲವು ಬಾರಿ ದಿಢೀರ್ ಆಗಿ ಸಭೆ ಮುಂದೂಡಿದ ಘಟನೆಗಳು ಈ ಹಿಂದೆಯು ನಡೆದಿತ್ತು. ವಿದ್ಯುತ್ ಬಳಕೆದಾರರು ಸಮಯ ಹೊಂದಾಣಿಕೆ ಮಾಡಿಕೊಂಡು ಸಭೆಗೆ ಬಂದರೆ ಸಭೆ ರದ್ದಾದ ಘಟನೆಗಳು ನಡೆದಿದೆ.
ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಇಡೀ ವಿದ್ಯುತ್ ಕೈಕೊಡುತ್ತಿದೆ. ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ನೆಟ್ವರ್ಕ್ ಹಾಗೂ ಹಗಲು ವೇಳೆ ಅಂಚೆಕಚೇರಿ ವ್ಯವಹಾರಗಳು ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಳ್ಳುತ್ತದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490