ಸುಳ್ಯ: ಪಿರಿಯಾಪಟ್ಟಣ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ಸನ್ಮಾನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ಕಸಾಪ ವತಿಯಿಂದ ಜೂನ್.2 ರಂದು ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಕುಂಞಿ ಅಹಮ್ಮದ್ ಅವರನ್ನು ಅಭಿನಂದಿಸಲಾಗುವುದು. ಪಿರಿಯಾಪಟ್ಟಣ ತಹಶೀಲ್ದಾರ್ ಆಗಿದ್ದ ಸಂದರ್ಭಗಳಲ್ಲಿ ಕುಂಞಿ ಅಹಮ್ಮದ್ ಅವರ ಜನ ಸೇವೆಯನ್ನು ಪರಿಗಣಿಸಿ ಮತ್ತು ಕನ್ನಡ ಭಾಷೆಯ ಬೆಳವಣಿಗೆ ಮತ್ತು ಕನ್ನಡ ಶಾಲೆಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಇವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel