ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಲೋಕಸಭೆ ಮತ್ತು ನಗರಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆ ಜೂ.11ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಶಾಸಕ ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…