ಪುತ್ತೂರು: ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ ಜೂ.18 ರಂದು ಮಂಗಳವಾರ ಬೆಳಿಗ್ಗೆ 10.30 ಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮೂರು ಮುಖ್ಯ ಕಾರ್ಯಕ್ರಮಗಳು ಆ ದಿನ ನಡೆಯಲಿದ್ದು ಕೇಂದ್ರ ಸರ್ಕಾರದಿಂದ ಪರಿಶಿಷ್ಟ ಜಾತಿ ಅಭಿವೃದ್ಧಿಗೆ ನಿರ್ದೇಶನಾಲಯಕ್ಕೆ ಮಂಜೂರಾದ ಯೋಜನೆಯ ಉದ್ಘಾಟನೆ ಹಾಗೂ ರೈತ ಉತ್ಪಾದಕ ಕಂಪನಿಗಳ ಬಗ್ಗೆ ಮಾಹಿತಿ ಮತ್ತು ಅಖಿಲ ಭಾರತ ಗೇರು ಬೆಳೆಗಾರರ ಸಂಘ ಹುಟ್ಟುಹಾಕಲು ಸಮಾಲೋಚನಾ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಡಾ. ಮಂಜುನಾಥ ಕೆ. ನಾಯ್ಕ್,ಗೇರು ಮತ್ತು ಕೋಕೋ ಅಭಿವೃದ್ಧಿನಿರ್ದೇಶನಾಲಯದ ನಿರ್ದೇಶಕ ಡಾ. ವೆಂಕಟೇಶ್, ಎನ್. ಹುಬ್ಬಳ್ಳಿ, ಭಾಗವಹಿಸುವರು. ರೈತ ಉತ್ಪಾದಕ ಕಂಪನಿಗಳ ಬಗ್ಗೆ ಎಸ್. ರಮೇಶ್ ಹಾಗೂ ರಾಮ್ ಕಿಶೋರ್ ಮಂಚಿ, ಡಾ. ಹೆಚ್ .ಆರ್. ನಾಯಕ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…