ಮಡಿಕೇರಿ :ಜಿಲ್ಲೆಯಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸೂಚನೆ ಇರುವುದಿಲ್ಲ. ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಆಗುವ ಸಂಭವ ಇರುತ್ತದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಸ್ಪಷ್ಟ ಪಡಿಸಿದೆ. ಜೂನ್, 20 ಮತ್ತು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆಯು ಚುರುಕುಗೊಳ್ಳಲಿದ್ದು, ಮುಂದಿನ ಎರಡು ವಾರಗಳವರೆಗೆ ಮುಂದುವರೆಯಲಿದೆ. ಈ ಸಂದರ್ಭಗಳಲ್ಲಿ ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ-1077(08272), ವಾಟ್ಸ್ ಆಪ್ ನಂ.8550001077 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel